ನವದೆಹಲಿ: ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ಖ್ಯಾತ ಅಥ್ಲೀಟ್ ಪಿ.ಟಿ. ಉಷಾ ಹಾಗೂ ಸಂಗೀತ ನಿರ್ದೇಶಕ ಇಳಯರಾಜ ಮತ್ತು ಕೆ.ವಿ. ವಿಜಯೇಂದ್ರ ಪ್ರಸಾದ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ PT ಉಷಾ, ಇಳಯರಾಜ, ವೀರೇಂದ್ರ ಹೆಗ್ಗಡೆ, KV ವಿಜಯೇಂದ್ರ ಪ್ರಸಾದ್ ಅವರನ್ನು ಆಯ್ಕೆ ಮಾಡಿದ್ದು, ವಿಭಿನ್ನ ಕ್ಷೇತ್ರಗಳಲ್ಲಿ ಛಾಪು ಮೂಡಿಸಿರುವ ಅತ್ಯುತ್ತಮ ಭಾರತೀಯರನ್ನು ಮೋದಿ ಸರ್ಕಾರ ಗುರುತಿಸುವ ಇನ್ನೊಂದು ಉದಾಹರಣೆಯನ್ನು ತೋರಿಸುತ್ತದೆ ಎಂದು ಹೇಳಲಾಗಿದೆ.
ನಾಲ್ಕು ನಾಮನಿರ್ದೇಶಿತ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಾಗಿದ್ದಾರೆ. ಅವರ ಕೊಡುಗೆಗಳಿಗಾಗಿ ರಾಷ್ಟ್ರೀಯ ಮತ್ತು ಜಾಗತಿಕ ಮನ್ನಣೆಯನ್ನು ಪಡೆದಿದ್ದಾರೆ. ನಾಲ್ಕು ನಾಮನಿರ್ದೇಶಿತ ಪ್ರತಿನಿಧಿಗಳಲ್ಲಿ ಮೂವರು ದಕ್ಷಿಣ ಭಾರತದ ವಿವಿಧ ರಾಜ್ಯಗಳನ್ನು ಪ್ರತಿನಿಧಿಸುತ್ತಾರೆ.
ನಾಲ್ವರು ನಾಮನಿರ್ದೇಶಿತ ಸದಸ್ಯರಲ್ಲಿ ಒಬ್ಬರು ಮಹಿಳೆ, ಒಬ್ಬರು ದಲಿತರು, ಒಬ್ಬರು ಧಾರ್ಮಿಕ ಅಲ್ಪಸಂಖ್ಯಾತ(ಜೈನ ಸಮುದಾಯ ) ಸದಸ್ಯ ಸೇರಿದ್ದಾರೆ. ಒಬ್ಬರು ಕ್ರೀಡಾಪಟುಗಳನ್ನು ಬೆಳೆಸಿದರೆ, ಇನ್ನೊಬ್ಬರು ಸೃಜನಶೀಲ ಪ್ರತಿಭೆಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಇನ್ನೊಬ್ಬರು ಚಿತ್ರರಂಗದ ಪ್ರತಿಭೆಯನ್ನು ಪೋಷಿಸಿದ್ದಾರೆ ಮತ್ತೊಬ್ಬರು ಏಕತೆಯ ಸೇವೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಇಬ್ಬರು ಪದ್ಮವಿಭೂಷಣ ಪುರಸ್ಕೃತರು ಮತ್ತು ಪದ್ಮಶ್ರೀ ಪುರಸ್ಕೃತರು ಸೇರಿದ್ದಾರೆ


