Thursday, June 4, 2026
Homeಕರಾವಳಿಮಳೆ ಪೀಡಿತ ಜಿಲ್ಲಾಡಳಿತಗಳ ಜೊತೆ ನಾಳೆ ಸಿಎಂ ಬೊಮ್ಮಾಯಿ ವೀಡಿಯೋ ಕಾನ್ಫರೆನ್ಸ್

ಮಳೆ ಪೀಡಿತ ಜಿಲ್ಲಾಡಳಿತಗಳ ಜೊತೆ ನಾಳೆ ಸಿಎಂ ಬೊಮ್ಮಾಯಿ ವೀಡಿಯೋ ಕಾನ್ಫರೆನ್ಸ್

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಇತರೇ ಅಧಿಕಾರಿಗಳ ಜೊತೆ ವೀಡಿಯೋ ಸಂವಾದ ನಡೆಸಲಿದ್ದಾರೆ.

ಮಳೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಸಿಇಓ ಗಳ ಜತೆ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮತ್ತು ಅದರಿಂದ ಉಂಟಾಗಿರುವ ಹಾನಿ ಕುರಿತು ಮಾಹಿತಿ ಪಡೆಯಲಿದ್ದಾರೆ.

ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ? ಎಷ್ಟು ಹಾನಿಯಾಗಿದೆ?
ಎಂಬುದರ ಕುರಿತು ಮಾಹಿತಿ ಪಡೆದು ಸೂಕ್ತ ನಿರ್ದೇಶನವನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಲಿದ್ದಾರೆ.

ನಾಳೆ ಮಧ್ಯಾಹ್ನ 2.30 ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಿಂದ ವೀಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಸಂಬಂಧಪಟ್ಟ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

- Advertisement -

Latest News

error: Content is protected !!