Thursday, June 4, 2026
Homeತಾಜಾ ಸುದ್ದಿರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ನಟ 

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ನಟ 

- Advertisement -
- Advertisement -

ನವದೆಹಲಿ : ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್ ಅವರು ಇಂದು ರಾಜ್ಯಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು.  

ನಟ ಜಗ್ಗೇಶ್ ಇಂದು ರಾಜ್ಯಸಭೆಯಲ್ಲಿ ಕನ್ನಡ ಭಾಷೆಯಲ್ಲಿ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೊತೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್ ಸಿಂಗ್ ಹಾಗೂ ಜೈಶ್ರೀರಾಮ್ ರಮೇಶ್ ಅವರೂ ಇಂದು ರಾಜ್ಯ ಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಜಯ ಸಾಧಿಸಿದ್ದರು.

- Advertisement -

Latest News

error: Content is protected !!