Thursday, June 4, 2026
Homeತಾಜಾ ಸುದ್ದಿಸುರತ್ಕಲ್:‌ ಓಮಿನಿ ಮೇಲೆ ಪಲ್ಟಿಯಾದ ಲಾರಿ: ಓರ್ವನ ಸ್ಥಿತಿ ಗಂಭೀರ

ಸುರತ್ಕಲ್:‌ ಓಮಿನಿ ಮೇಲೆ ಪಲ್ಟಿಯಾದ ಲಾರಿ: ಓರ್ವನ ಸ್ಥಿತಿ ಗಂಭೀರ

- Advertisement -
- Advertisement -

ಸುರತ್ಕಲ್: ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಇಂದು ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಸ್ಟೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಗೋಕುಲ ನಗರ ನಿವಾಸಿ ಲೋಕೇಶ್ ಕುಲಾಲ್ (38) ಎಂದು ತಿಳಿದು ಬಂದಿದೆ. ಲಾರಿ ಚಾಲಕನ ಅಜಾಗರೂಕತೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ.ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಲೋಕೇಶ್ ಅವರನ್ನು ರಕ್ಷಿಸಲಾಗಿದೆ.ಸ್ಕೂಟರ್ ಸವಾರರೊಬ್ಬರು ಅವಘಡದಲ್ಲಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!