Saturday, June 13, 2026
Homeಕರಾವಳಿಉಡುಪಿಸಚಿವರ ಜೊತೆ ಕರಾವಳಿ ಪ್ರವಾಸ ಕೈಗೊಂಡ ಸಿಎಂ

ಸಚಿವರ ಜೊತೆ ಕರಾವಳಿ ಪ್ರವಾಸ ಕೈಗೊಂಡ ಸಿಎಂ

- Advertisement -
- Advertisement -

ಬೆಂಗಳೂರು: ಕರಾವಳಿಯಲ್ಲಿ ವ್ಯಾಪಕ ಮಳೆ ಹಾನಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿನಿಂದ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ.

ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಿಎಂ ಬೊಮ್ಮಾಯಿ ಸಚಿವರುಗಳ ಜೊತೆ ಮಳೆ ಹಾನಿ ಪ್ರದೇಶಗಳ ವೀಕ್ಷಣೆ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

ಇಂದು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿರುವ ಸಿಎಂ, ಮಡಿಕೇರಿ ಮತ್ತು ಮಂಗಳೂರಿನಲ್ಲಿ ಜಿಲ್ಲಾಡಳಿತಗಳ ಜೊತೆ ಸಭೆ ನಡೆಸಲಿದ್ದಾರೆ.

ನಾಳೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿರುವ ಬಸವರಾಜ ಬೊಮ್ಮಾಯಿ ಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಣಿಪಾಲ ಮತ್ತು ಭಟ್ಕಳದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಸಿಎಂ ಜೊತೆ ಕಂದಾಯ ಸಚಿವ ಆರ್‌. ಅಶೋಕ್, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾನಿ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ.

- Advertisement -

Latest News

error: Content is protected !!