ಇದೇ ಬರುವ ಆಗಸ್ಟ್ 5ರಿಂದ 15 ರವರೆಗೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ಫಲಪುಷ್ಪ ಪ್ರದರ್ಶನ ನಡೆಸಲಾಗುವುದು ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದರು.
ಅವರು ವಿಕಾಸಸೌಧದಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿ, ”ಈ ಬಾರಿ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ ವಿದೇಶಗಳಿಂದ ಹೂವು, ಗಿಡಗಳನ್ನು ತರಿಸಲಾಗಿದೆ. ಪ್ರಮುಖವಾಗಿ ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಲಿದ್ದಾರೆ” ಎಂದು ತಿಳಿಸಿದರು.
ಇನ್ನು ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಫಲಪುಷ್ಪ ಪ್ರದರ್ಶನ ಮಾಡಿರಲಿಲ್ಲ. ಆದರೆ, ಈ ವರ್ಷ ಕೋವಿಡ್ ನಿಯಮಗಳೊಂದಿಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಮಾಡಲಾಗುವುತ್ತದೆ. ಒಟ್ಟು 10 ದಿನಗಳ ಕಾಲ ಈ ಪುಷ್ಪ ಪ್ರದರ್ಶನ ಇರಲಿದ್ದು, ಇನ್ನೆರಡು ದಿನ ಮುಂದುವರೆಸಲು ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಗಾಜನೂರಿನಲ್ಲಿರುವ ರಾಜಕುಮಾರ್ ಅವರ ಮನೆಗೆ ಪುಷ್ಪಾಲಂಕಾರ ಮಾಡಲಾಗುವುದು” ಎಂದು ಅವರು ತಿಳಿಸಿದರು.