Saturday, June 6, 2026
Homeತಾಜಾ ಸುದ್ದಿಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪ್ರಮುಖ ಆರೋಪಿ ಗಣಪತಿ ಭಟ್ ಅರೆಸ್ಟ್

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪ್ರಮುಖ ಆರೋಪಿ ಗಣಪತಿ ಭಟ್ ಅರೆಸ್ಟ್

- Advertisement -
- Advertisement -

ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ‌ ಗಣಪತಿ ಭಟ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ಸಿಐಡಿ ಅಧಿಕಾರಿಗಳು ಗಣಪತಿ ಭಟ್ ರನ್ನು ಬಂಧಿಸಿದ್ದು, ಸಿಐಡಿ ಕಚೇರಿಗೆ ಕರೆದೊಯ್ದಿದ್ದಾರೆ.

ಎಡಿಜಿಪಿ ಅಮೃತ್ ಪೌಲ್ ನೀಡಿದ ಹೇಳಿಕೆ ಆಧರಿಸಿ ಗಣಪತಿ ಭಟ್ ರನ್ನು ಅರೆಸ್ಟ್ ಮಾಡಲಾಗಿದೆ. ಪಿಎಸ್‌ಐ ಅಕ್ರಮ ನೇಮಕಾತಿಯಲ್ಲಿ ಗಣಪತಿ ಭಟ್ ಭಾಗಿಯಾಗಿರುವ ಮಾಹಿತಿ ದೊರಕಿದೆ. ಗಣಪತಿ ಭಟ್ ಹಲವು ಪಿಎಸ್‌ಐಗಳ ಅಕ್ರಮ ನೇಮಕಾತಿಯಲ್ಲಿ ಭಾಗಿಯಾಗಿದ್ದಾರೆಂದು ವಿಚಾರಣೆಗೊಳಗಾದ ಅಪರಾಧಿಗಳು ಮಾಹಿತಿಯನ್ನು ನೀಡಿದ್ದಾರೆ. ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ.

545 ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೆ ಸಿಐಡಿ ಪೊಲೀಸರು ಬಿಜೆಪಿ, ಕಾಂಗ್ರೆಸ್ ಪಕ್ಷದ ಮುಖಂಡರು, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!