Tuesday, October 13, 2026
Homeಕರಾವಳಿಉಪ್ಪಿನಂಗಡಿಯಲ್ಲಿ ತಡೆಗೋಡೆ ಕಾಮಗಾರಿ ವೀಕ್ಷಿಸಿದ ಸಿಎಂ ಬೊಮ್ಮಾಯಿ

ಉಪ್ಪಿನಂಗಡಿಯಲ್ಲಿ ತಡೆಗೋಡೆ ಕಾಮಗಾರಿ ವೀಕ್ಷಿಸಿದ ಸಿಎಂ ಬೊಮ್ಮಾಯಿ

- Advertisement -
- Advertisement -

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ವೀಕ್ಷಣೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಪ್ಪಿನಂಗಡಿಯ ನೇತ್ರಾವತಿ ನದಿಯ ಸೇತುವೆ ಬಳಿ ಕಾಮಗಾರಿ ವೀಕ್ಷಣೆ ಮಾಡಿದರು.

ಸೇತುವೆ ಬಳಿಕ ನಿರ್ಮಾಣವಾಗುತ್ತಿರುವ ಗುಡ್ಡ ಕುಸಿತಕ್ಕೆ ತಡೆಗೋಡೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಕಂದಾಯ ಸಚಿವ ಆರ್. ಅಶೋಕ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉಪಸ್ಥಿತರಿದ್ದರು.

- Advertisement -

Latest News

error: Content is protected !!