ಮಂಗಳೂರು: ಮದ್ಯ ಮಾರಾಟದಲ್ಲಿ ದ.ಕ ಜಿಲ್ಲೆ ರಾಜ್ಯಕ್ಕೆ ನಂಬರ್ ಒನ್ ಅಲ್ಲ ಎಂದು ಮಂಗಳೂರು ಅಬಕಾರಿ ಡಿಸಿ ಬಿಂದುಶ್ರೀ ಸ್ಪಷ್ಟನೆ ನೀಡಿದ್ದಾರೆ.ಅಲ್ಲದೇ ಇದೊಂದು ಸುಳ್ಳು ಸುದ್ದಿ ಎಂದಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ಈ ಬಗ್ಗೆ ನಾವು ಯಾರಿಗೂ ಕೊಟ್ಟಿಲ್ಲ. ರಾಜ್ಯದಲ್ಲಿ ದ.ಕ ಜಿಲ್ಲೆಯಲ್ಲಿ ಅತೀ ಹೆಚ್ಚು ಮದ್ಯ ಮಾರಾಟ ಎನ್ನುವುದು ಸರಿಯಲ್ಲ. ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಮಗಿಂತ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಮಾರಾಟ ಆಗುತ್ತಿದೆ. ಈ ಬಗ್ಗೆ ಯಾವುದೇ ವರದಿಯನ್ನು ನಮ್ಮ ಇಲಾಖೆ ವತಿಯಿಂದ ಕೊಟ್ಟಿಲ್ಲ. ಲೀಟರ್ ಲೆಕ್ಕಾಚಾರದಲ್ಲಿ ಹೇಳಿದರೂ ನಮಗಿಂತ ಬೇರೆ ಜಿಲ್ಲೆಗಳಲ್ಲಿ ಮದ್ಯ ಮಾರಾಟ ಹೆಚ್ಚಾಗಿದೆ ಎಂದಿದ್ದಾರೆ.
ಆದರೆ ಕೋವಿಡ್ ಬಳಿಕ ನಮ್ಮ ಜಿಲ್ಲೆಯಲ್ಲಿ ಸ್ವಲ್ಪ ಮದ್ಯ ಮಾರಾಟ ಹೆಚ್ಚಾಗಿರುವುದು ನಿಜ. ಹಾಗಂತ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಅದು ಕಡಿಮೆ. ಹೀಗಾಗಿ ದ.ಕ ಜಿಲ್ಲೆ ಮದ್ಯ ಮಾರಾಟದಲ್ಲಿ ಟಾಪರ್ ಎಂಬ ಸುದ್ದಿ ಸುಳ್ಳು ಅಂತ ಸ್ಪಷ್ಟನೆ ಕೊಟ್ಟಿದ್ದಾರೆ.