Monday, June 8, 2026
Homeಕರಾವಳಿಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದಾತನ ಬಂಧನ

ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದಾತನ ಬಂಧನ

- Advertisement -
- Advertisement -

ಪುತ್ತೂರು; ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪುತ್ತೂರು ನಗರ ಠಾಣಾ ಪೊಲೀಸರ ತಂಡ ಬಂಧಿಸಿದೆ.

ನಗರದ ಕಾಲೇಜೊಂದರ ವಿದ್ಯಾರ್ಥಿ ಕೇರಳ ಮೂಲದ ಮುಬಿನ್ (20) ಬಂಧಿತ. ಈತನನ್ನು ಗಾಂಜಾ ಸಹಿತ ವಶಕ್ಕೆ ಪಡೆದುಕೊಳ್ಳಲಾಗಿದೆ.

ಕಳೆದ ಕೆಲ ಸಮಯಗಳಿಂದ ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಎಸ್.ಐ ರಾಜೇಶ್ ಕೆ.ವಿ ಮತ್ತು ತಂಡ ಕಾರ್ಯಾಚರಣೆ ನಡೆಸಿದ್ದು, ಬಂಧಿತನಿಂದ ಸುಮಾರು ಅರ್ಧ ಕೆಜಿ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.

- Advertisement -

Latest News

error: Content is protected !!