Saturday, June 6, 2026
Homeಕರಾವಳಿಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ‌ಮಿಜಾರು ನೇಮಕಾತಿ ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ‌ಮಿಜಾರು ನೇಮಕಾತಿ ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ

- Advertisement -
- Advertisement -

ಬೆಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು ಅವರ ನೇಮಕಾತಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಒಟ್ಟು ಹನ್ನೆರಡು ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರುಗಳ‌ ನಾಮನಿರ್ದೇಶನವನ್ನು ರದ್ದುಪಡಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಇತ್ತೀಚೆಗಷ್ಟೇ ಒಂದೂವರೆ ವರ್ಷ ಪೂರೈಸಿದ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಸದಸ್ಯರ ನಾಮನಿರ್ದೇಶನವನ್ನು ವಾಪಸ್ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಆದೇಶ ಹೊರಡಿಸಿದ್ದರು.

ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರವಿಶಂಕರ್ ಮಿಜಾರು ನೇಮಕಗೊಂಡಿದ್ದರು.

- Advertisement -

Latest News

error: Content is protected !!