- Advertisement -
- Advertisement -
ಬೆಂಗಳೂರು : ಸರ್ಕಾರಿ ಶಾಲೆಗಳನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಒಂದನೇ ತರಗತಿಯಿಂದಲೇ ‘ಸ್ಪೋಕನ್ ಇಂಗ್ಲೀಷ್ ಕಲಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಸಕ್ತ ವರ್ಷದಿಂದಲೇ ರಾಜ್ಯದ 1 ರಿಂದ 8 ನೇ ತರಗತಿ ಶಾಲಾ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲು ತಯಾರಿ ಮಾಡಲಾಗುತ್ತಿದೆ. ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಂವಹನ ಹಾಗು ಶಿಕ್ಷಣ ಪಡೆಯುವ ಉದ್ದೇಶದಿಂದ ಪ್ರಸಕ್ತ ವರ್ಷದಿಂದಲೇ ಇಂಗ್ಲೀಷ್ ಸ್ಪೋಕನ್ ಕ್ಲಾಸ್ ಶುರು ಮಾಡಲು ಮುಂದಾಗಿದೆ. ಸರ್ಕಾರಿ ಶಾಲೆಗಳಲ್ಲಿರುವ ಇಂಗ್ಲೀಷ್ ಶಿಕ್ಷಕರಿಗೆ ಈ ಬಗ್ಗೆ ವಿಶೇಷ ತರಬೇತಿ ಹಾಗು ಕೌಶಲ್ಯ ಹೆಚ್ಚಿಸಲು ಸಿದ್ಧತೆ ಮಾಡಲಾಗುತ್ತಿದೆ.
- Advertisement -