- Advertisement -
![]()
- Advertisement -
ಮಂಗಳೂರು: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಸುರತ್ಕಲ್ ಗೋವಿಂದ ದಾಸ್ ಕಾಲೇಜು ಮುಂಭಾಗ ಗುರುವಾರ ರಾತ್ರಿ ನಡೆದಿದೆ. ಕಟಪಾಡಿ ಮಟ್ಟು ನಿವಾಸಿ ಅಕ್ಷಯ್ (33) ಮೃತ ದುರ್ದೈವಿ.
ಅಕ್ಷಯ್ ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಟಪಾಡಿಯ ತನ್ನ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಸುರತ್ಕಲ್ ಗೋವಿಂದ ದಾಸ್ ಕಾಲೇಜು ಮುಂಭಾಗದಲ್ಲಿ ಲಾರಿಯ ಚಕ್ರದಡಿಗೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಾಹಿತಿ ತಿಳಿದ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟು ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆ ಸಂಬಂಧ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


