Thursday, June 4, 2026
Homeಕರಾವಳಿಕರಾವಳಿಯ 3 ಮರೀನಾಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಾಗಿ ಕಾರ್ಯಸಾಧ್ಯತಾ ನಿಧಿ: ನವದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಕರಾವಳಿಯ 3 ಮರೀನಾಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಾಗಿ ಕಾರ್ಯಸಾಧ್ಯತಾ ನಿಧಿ: ನವದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

- Advertisement -
- Advertisement -

ನವದೆಹಲಿ: ಅಂಗರಘಟ್ಟದಿಂದ ಮಣಿಪಾಲ ವಾಟರ್ ವೇ ಯೋಜನೆಯ ಸಮೀಕ್ಷೆ ಹಾಗೂ ಡಿಪಿಆರ್ ಸಿದ್ಧವಾಗುತ್ತಿದ್ದು, ಇನ್ನೆರಡು ತಿಂಗಳಲ್ಲಿ ಪ್ರಸ್ತಾವನೆ ಮಂಜೂರಾತಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಬಂದರು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನವಾಲ್ ಅವರನ್ನು ಭೇಟಿ ಮಾಡಿದ ಬಳಿಕ ಸಿಎಂ ಈ ಮಾಹಿತಿ ತಿಳಿಸಿದ್ದಾರೆ.

ಬೈಂದೂರು, ಮಲ್ಪೆ ಹಾಗೂ ಮಂಗಳೂರು ಮರೀನಾಗಳಲ್ಲಿ ಪ್ರವಾಸೋದ್ಯಮ ಹಾಗೂ ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಕಾರ್ಯಸಾಧ್ಯತಾ ನಿಧಿಯನ್ನು ನೀಡಲಾಗುವುದು‌ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಪಿಪಿಪಿ ಮಾದರಿಯಲ್ಲಿ ಕೈಗೊಳ್ಳುವಂತೆ ಸೂಚಿಸಿದ್ದು, ಅದರಂತೆ 8-10 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದು ಹೇಳಿರುವ ಸಿಎಂ ಬಸವರಾಜ ಬೊಮ್ಮಾಯಿ, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಗ್ಗೆ ತಜ್ಞರಿದ್ದರೆ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!