Thursday, June 4, 2026
Homeಕರಾವಳಿವಿಟ್ಲ: ಮಗಳ ಮೇಲೆ ಅತ್ಯಾಚಾರವೆಸಗಿದ‌ ತಂದೆಗೆ  20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ವಿಟ್ಲ: ಮಗಳ ಮೇಲೆ ಅತ್ಯಾಚಾರವೆಸಗಿದ‌ ತಂದೆಗೆ  20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

- Advertisement -
- Advertisement -

ವಿಟ್ಲ; ಇಲ್ಲಿನ  ಪೆರುವಾಯಿಯಲ್ಲಿ ಹೆತ್ತ ಮಗಳ ಮೇಲೆಯೇ ತಂದೆ ಅತ್ಯಾಚಾರ ಮಾಡಿರುವ ಪ್ರಕರಣ ಇದೀಗ ಸಾಬೀತಾಗಿದ್ದು, ಆರೋಪಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಮತ್ತು ದಂಡ ವಿಧಿಸಿ ಆದೇಶ ನೀಡಿದೆ.

2020ನೇ  ಮಾರ್ಚ್  ತಿಂಗಳಿನಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ, ಪೆರುವಾಯಿ ಗ್ರಾಮದ  ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ  ಅತ್ಯಾಚಾರವೆಸಗಿದ್ದ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಚಾರಣೆ ಕೈಗೆತ್ತಿಕೊಂಡ ಹೆಚ್ಚುವರಿ  ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ  ಕೆ. ಎಮ್. ರಾಧಕೃಷ್ಣರವರು ಆರೋಪಿಗೆ  20 ವರ್ಷ  ಕಠಿಣ ಕಾರಾಗೃಹ ಹಾಗೂ 25.000/- ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

- Advertisement -

Latest News

error: Content is protected !!