Saturday, June 6, 2026
Homeತಾಜಾ ಸುದ್ದಿಹಿಜಾಬ್‌ ಹಿಂದಿನ ಶಕ್ತಿಗಳೇ ಪ್ರವೀಣ್‌ ಹತ್ಯೆಯಲ್ಲೂ ಭಾಗಿ: ಆರಗ ಜ್ಞಾನೇಂದ್ರ

ಹಿಜಾಬ್‌ ಹಿಂದಿನ ಶಕ್ತಿಗಳೇ ಪ್ರವೀಣ್‌ ಹತ್ಯೆಯಲ್ಲೂ ಭಾಗಿ: ಆರಗ ಜ್ಞಾನೇಂದ್ರ

- Advertisement -
- Advertisement -

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವ ವೇಳೆ ಘಟನೆ ನಡೆದಿದೆ. ಇದು ದುರದೃಷ್ಟಕರ ಹಾಗೂ ಖಂಡನೀಯ ಎಂದು ತಿಳಿಸಿದ್ದಾರೆ.

ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ. ಹಿಜಾಬ್ ಹಿಂದಿನ ಶಕ್ತಿಗಳೇ ಈ ಕೃತ್ಯದಲ್ಲೂ ಇದ್ದಾರೆ. ಸೈದ್ಧಾಂತಿಕ ಭಿನ್ನಾಭಿಪ್ರಾಯ ಏನೇ ಇರಲಿ. ಆದರೆ ಹತ್ಯೆ ಮಾಡುವುದು, ರಕ್ತ ಹರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ. ಆ ಭಾಗದ ಜನ ಉದ್ವೇಗಕ್ಕೆ ಒಳಗಾಗಬೇಡಿ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಕೂಡ ಮಾತಾಡಿದ್ದೇನೆ. ಶಾಂತಿ, ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!