- Advertisement -
- Advertisement -
ಬೆಂಗಳೂರು: ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ. ಒಬ್ಬ ಗೃಹ ಸಚಿವರನ್ನು ಪಕ್ಷ ಕೈಗೆ ತೆಗೆದುಕೊಂಡರೆ ರಾಜ್ಯ ಉಳಿಯಲು ಸಾಧ್ಯವಿಲ್ಲ ಎಂದರು.
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಡಿಜಿಪಿ ಅಥವಾ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳು ಈ ಹತ್ಯೆಯ ಹಿಂದೆ ಯಾರಿದ್ದಾರೆ ಎಂದು ಹೇಳಲಿ. ರಾಜಕೀಯ ಕಾರಣವೋ ವೈಯಕ್ತಿಕ ಕಾರಣವೋ ಎಂಬುವುದನ್ನು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಹತ್ಯೆ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವರು ಹಾಗೂ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
- Advertisement -