- Advertisement -
- Advertisement -
ಪುತ್ತೂರು: ಮೃತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಂಘ ಪರಿವಾರದ ವತಿಯಿಂದ 50 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಕರ್ನಾಟಕ ದಕ್ಷಿಣ ಪ್ರಾಂತ್ಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸೇವಾ ಪ್ರಮುಖ್ ನಾ. ಸೀತಾರಾಮ ರವರು ತಿಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ನೆರವು ನೀಡುವಂತೆ ಹಿಂದೂ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸಿದ್ದರು. ಆದರೆ ಸರಕಾರವಾಗಲೀ, ಜನಪ್ರತಿನಿಧಿಗಳಾಗಲೀ ಇದುವರೆಗೆ ನೆರವು ಘೋಷಿಸಿಲ್ಲ. ಈ ನಿಟ್ಟಿನಲ್ಲಿ ಪ್ರವೀಣ್ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.
- Advertisement -