Monday, August 31, 2026
Homeಕರಾವಳಿಬೆಳ್ತಂಗಡಿ : ತೋಡು ದಾಟುವಾಗ ಕಾಲು ಜಾರಿ ಬಿದ್ದು ನೀರಲ್ಲಿ ಮುಳುಗಿ ವ್ಯಕ್ತಿ ಸಾವು

ಬೆಳ್ತಂಗಡಿ : ತೋಡು ದಾಟುವಾಗ ಕಾಲು ಜಾರಿ ಬಿದ್ದು ನೀರಲ್ಲಿ ಮುಳುಗಿ ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ : ವ್ಯಕ್ತಿಯೊಬ್ಬರು ಅಂಗಡಿಗೆ ಹೋಗಿ ವಾಪಸ್ ಮನೆಗೆ ಬರುವಾಗ ಮನೆಯ ಬಳಿ ತೋಡು ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದಬೆಟ್ಟು ನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬರಮೇಲು ನಿವಾಸಿ ಪೂವಪ್ಪ(54) ಎಂಬವರು ಬುಧವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ಮನೆಯಿಂದ ಕಿಲ್ಲೂರು  ಅಂಗಡಿ ಹೋಗಿ ವಾಪಸ್ ಮನೆಗೆ ಹೋಗುವಾಗ ಮನೆಯ ತೋಟದ ತೋಡು ದಾಟುವ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.

ಮನೆಯವರು ಪೂವಪ್ಪ ಅವರು  ಸಂಜೆಯಾಗಿದ್ದರೂ, ವಾಪಸ್ ಬರದೆ ಇದ್ದಾಗ ಹುಡುಕಾಟ ನಡೆಸಿದ್ದಾರೆ. ರಾತ್ರಿ ಸುಮಾರು 9 ಗಂಟೆಗೆ ತೋಟದ ತೋಡಿನಲ್ಲಿ ಬಿದ್ದು ಸಾವನ್ನಪ್ಪಿರೋದು ಗೊತ್ತಾಗಿದೆ.

ಬುಧವಾರ  ಮಳೆ ಇದ್ದ ಕಾರಣ ತೋಡಿನಲ್ಲಿ ನೀರು ಜಾಸ್ತಿ ಇದ್ದ ಕಾರಣ ನೀರಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ಮನೆಯವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

- Advertisement -

Latest News

error: Content is protected !!