Wednesday, June 3, 2026
Homeಕರಾವಳಿಪ್ರವೀಣ್ ನೆಟ್ಟಾರ್ ಮೃತದೇಹದ ಮೆರವಣಿಗೆ ವೇಳೆ ಲಾಠಿ ಚಾರ್ಜ್ ಪ್ರಕರಣ: ಗಾಯಗೊಂಡ ಹುಬ್ಬಳ್ಳಿ ರಮೇಶ್ ಮನೆಗೆ...

ಪ್ರವೀಣ್ ನೆಟ್ಟಾರ್ ಮೃತದೇಹದ ಮೆರವಣಿಗೆ ವೇಳೆ ಲಾಠಿ ಚಾರ್ಜ್ ಪ್ರಕರಣ: ಗಾಯಗೊಂಡ ಹುಬ್ಬಳ್ಳಿ ರಮೇಶ್ ಮನೆಗೆ ಸಚಿವ ಎಸ್.ಅಂಗಾರ ಭೇಟಿ

- Advertisement -
- Advertisement -

ಮಂಗಳೂರು: ಪ್ರವೀಣ್ ನೆಟ್ಟಾರ್ ಮೃತದೇಹದ ಮೆರವಣಿಗೆ ವೇಳೆ ಲಾಠಿ ಚಾರ್ಜ್ ವೇಳೆ ಗಾಯಗೊಂಡ ಆರ್ ಎಸ್ ಎಸ್ ಕಾರ್ಯಕರ್ತ ರಮೇಶ್ ಮನೆಗೆ ಇಂದು ಸಚಿವ ಅಂಗಾರ ಅವರು ಭೇಟಿ ನೀಡಿದ್ದಾರೆ.

ಪ್ರವೀಣ್ ಅಂತ್ಯಸಂಸ್ಕಾರದ ವೇಳೆ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಆರ್ ಎಸ್ ಎಸ್ ಕಾರ್ಯಕರ್ತ ರಮೇಶ್ ಅವರ ಮೇಲೂ ಲಾಠಿ ಚಾರ್ಜ್ ಮಾಡಲಾಗಿತ್ತು. ರಮೇಶ್ ಅವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಆರ್ ಎಸ್ ಎಸ್ ನಾಯಕರು ಕೂಡ ರಮೇಶ್ ಅವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದರು.  

ಈ ಹಿನ್ನೆಲೆಯಲ್ಲಿ ಲಾಠಿ ಚಾರ್ಜ್ ಮಾಡಿದ್ದ ಪಿಎಸ್ ಐ ರುಕ್ಮಾ ನಾಯ್ಕ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಇದರ ಬೆನ್ನಲ್ಲೇ ಸಚಿವ ಅಂಗಾರ ಅವರು ರಮೇಶ್ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಸಚಿವ ಅಂಗಾರ ಅವರಿಗೆ 100 ಕ್ಕೂ ಹೆಚ್ಚು ಪೊಲೀಸರು ಭದ್ರತೆ ಒದಗಿಸಿದ್ದಾರೆ.

- Advertisement -

Latest News

error: Content is protected !!