Tuesday, June 9, 2026
Homeತಾಜಾ ಸುದ್ದಿವಿಧಾನ ಪರಿಷತ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್

ವಿಧಾನ ಪರಿಷತ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್

- Advertisement -
- Advertisement -

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದೆ. ಮಾಜಿ ಸಚಿವ ಬಾಬು ರಾವ್ ಚಿಂಚನಸೂರ್ ಅವರಿಗೆ ಬಿಜೆಪಿ ಟಿಕೆಟ್ ‌ನೀಡಿದೆ.

ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಾಗಿದ್ದ ಹಾಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಆಗಸ್ಟ್ ಹನ್ನೊಂದರಂದು ಉಪ ಚುನಾವಣೆ ನಿಗದಿಯಾಗಿದೆ.

ಗಂಗಾ ಮತಸ್ಥ ಸಮುದಾಯ ಮತ್ತು ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರಾತಿನಿಧ್ಯ ನೀಡುವ ಸಲುವಾಗಿ ಚಿಂಚನಸೂರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಮತ್ತೊಮ್ಮೆ ವಲಸಿಗ‌ ಅಭ್ಯರ್ಥಿಗೆ ಮಣೆ ಹಾಕಿದಂತಾಗಿದೆ.

ಕಾಂಗ್ರೆಸ್ ನಲ್ಲಿದ್ದ ಬಾಬುರಾವ್ ಚಿಂಚನಸೂರ್ ಕಳೆದ ವಿಧಾನಸಭೆ ಚುನಾವಣೆಯ ಬಳಿಕ ಬಿಜೆಪಿ ಸೇರ್ಪಡೆಯಾಗಿದ್ದು, ಹಾಲಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದಾರೆ.

- Advertisement -

Latest News

error: Content is protected !!