Saturday, June 13, 2026
Homeಕರಾವಳಿಮಂಗಳೂರು: ಫಾಜಿಲ್ ಕೊಲೆ‌ ಪ್ರಕರಣದಲ್ಲಿ ಅಮಾಯಕರಿಗೆ ತನಿಖೆ ನೆಪದಲ್ಲಿ ಕಿರುಕುಳ: ಬಿಜೆಪಿ ಶಾಸಕ ಭರತ್ ಶೆಟ್ಟಿ...

ಮಂಗಳೂರು: ಫಾಜಿಲ್ ಕೊಲೆ‌ ಪ್ರಕರಣದಲ್ಲಿ ಅಮಾಯಕರಿಗೆ ತನಿಖೆ ನೆಪದಲ್ಲಿ ಕಿರುಕುಳ: ಬಿಜೆಪಿ ಶಾಸಕ ಭರತ್ ಶೆಟ್ಟಿ ಆರೋಪ

- Advertisement -
- Advertisement -

ಮಂಗಳೂರು : ಸುರತ್ಕಲ್ ನಲ್ಲಿ ನಡೆದ ಫಾಜಿಲ್‌ ಕೊಲೆ ಪ್ರಕರಣದಲ್ಲಿ‌  ಅಮಾಯಕ ಹಿಂದೂ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಆರೋಪಿಸಿದ್ದಾರೆ.

ಕೊಲೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳು ಇದ್ದರೆ ಹಂತಕರನ್ನು ಬಂಧಿಸಿ ಅದು ಬಿಟ್ಟು ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ ಅವರ ಕುಟುಂಬದಲ್ಲಿ ಭೀತಿ ಹುಟ್ಟಿಸಿದರೆ ನಗರ ಪೊಲೀಸ್‌ ಕಮಿಷನರ್‌ ಕಚೇರಿಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ. ಪೊಲೀಸರ ಅನುಚಿತ ವರ್ತನೆಯ ಬಗ್ಗೆ ಗೃಹ ಸಚಿವರಿಗೆ ದೂರು ನೀಡುತ್ತೇನೆ’ ಎಂದೂ ಅವರು ಹೇಳಿದ್ದಾರೆ.

ಶಾಸಕರ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌, ‘ನಮಗೆ ಆರೋಪಿಗಳಷ್ಟೇ ಮುಖ್ಯ. ನಾವು ಅವರು ಯಾವ ಸಂಘಟನೆಯವರು ಎಂದೆಲ್ಲಾ ನೋಡಲು ಹೋಗುವುದಿಲ್ಲ‘ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!