- Advertisement -
![]()
- Advertisement -
ಕಾಸರಗೋಡು :ದಿಡೀರ್ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಮೂಲದ ಡಿ.ಶಿಲ್ಪಾ ಅವರನ್ನು ಕಾಸರಗೋಡಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೇರಳ ಸರಕಾರ ನೇಮಿಸಿದೆ . ಈವರೆಗೆ ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಪಿ.ಎಸ್.ಸಾಬು ರವರನ್ನು ಆಲಪ್ಪುಝ ಜಿಲ್ಲೆಗೆ ವರ್ಗಾಯಿಸಲಾಗಿದೆ.
ಕನ್ನಡತಿ ಶಿಲ್ಪಾ ಅವರು ಕಾಸರಗೋಡು ಜಿಲ್ಲೆಯ ಪ್ರಥಮ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾರೆ
ಶಿಲ್ಪಾ ಅವರು ಈ ಹಿಂದೆ ಕಾಸರಗೋಡು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಣ್ಣೂರು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
- Advertisement -


