Saturday, June 6, 2026
Homeಕರಾವಳಿಸುರತ್ಕಲ್ ನಲ್ಲಿ ಫಾಜಿಲ್ ಕೊಲೆ ಪ್ರಕರಣ; ಆರು ಮಂದಿಯನ್ನು ಬಂಧಿಸಿದ ಪೊಲೀಸರು

ಸುರತ್ಕಲ್ ನಲ್ಲಿ ಫಾಜಿಲ್ ಕೊಲೆ ಪ್ರಕರಣ; ಆರು ಮಂದಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು; ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ 6 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಸುಹಾಸ್ ಶೆಟ್ಟಿ (29),ಮೋಹನ್ (26), ಗಿರಿಧರ್@ ಗಿರಿ (27), ಶ್ರೀನಿವಾಸ್ @ ಶೀನು (23), ದೀಕ್ಷಿತ್ (21), ಅಭಿಷೇಕ್ @ ಅಭಿ(23) ಬಂಧಿತರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ಕಮಿಷನರ್ ಶಶಿಕುಮಾರ್, ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಕೃತ್ಯವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರ ವಿಚಾರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರು ಮಾಡಿದ್ದಾರೆ.

ಇನ್ನು

- Advertisement -

Latest News

error: Content is protected !!