Thursday, June 4, 2026
Homeತಾಜಾ ಸುದ್ದಿಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 5 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ

ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 5 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ

- Advertisement -
- Advertisement -

ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳುವ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣವಾಗಲಿದೆ.

ಛತ್ರ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಐದು ಕೋಟಿ ರೂಪಾಯಿ ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ.

ಶೀಘ್ರದಲ್ಲೇ ಕರ್ನಾಟಕ ಛತ್ರ ನಿರ್ಮಾಣ ಕಾರ್ಯ ಆರಂಭವಾಗಲಿದ್ದು, ರಾಜ್ಯದಿಂದ ತೆರಳುವ ಅಯ್ಯಪ್ಪ ಮಾಲಾಧಾರಿಗಳಿಗೆ ಅನುಕೂಲವಾಗಲಿದೆ.‌

ಎಲ್ಲಾ ಸೌಲಭ್ಯಗಳೂ ಕರ್ನಾಟಕ ಛತ್ರದಲ್ಲಿ ಸಿಗಲಿದೆ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಈಗಾಗಲೇ ತಿರುಪತಿ, ಮಂತ್ರಾಲಯ, ಪಂಡರಾಪುರ, ಶ್ರೀಶೈಲ, ಕಾಶಿ ಸೇರಿದಂತೆ ಹೊರ ರಾಜ್ಯಗಳಲ್ಲಿ ಕರ್ನಾಟಕ ಛತ್ರ ಕಾರ್ಯನಿರ್ವಹಿಸುತ್ತಿದೆ.

- Advertisement -

Latest News

error: Content is protected !!