Saturday, June 6, 2026
Homeತಾಜಾ ಸುದ್ದಿದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿಧಿಸಿದ್ದ ರಾತ್ರಿ ನಿರ್ಬಂಧ ಸಡಿಲಿಕೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿಧಿಸಿದ್ದ ರಾತ್ರಿ ನಿರ್ಬಂಧ ಸಡಿಲಿಕೆ

- Advertisement -
- Advertisement -

ಮಂಗಳೂರು: ಜಿಲ್ಲೆಯಲ್ಲಿ ಮೂರು ಕೊಲೆ ಪ್ರಕರಣಗಳ ನಡೆದ ಬಳಿಕ ಪೊಲೀಸ್ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಾನಾ ಕ್ರಮಗಳನ್ನು ಕೈಗೊಂಡಿದೆ. ಅದರಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಹೇರಲಾಗಿತ್ತು. ಆದರೀಗ ನೈಟ್ ಕರ್ಫ್ಯೂವನ್ನು ಸಡಿಲಿಕೆ ಮಾಡಲಾಗಿದೆ.

ನಾಳೆಯಿಂದ ರಾತ್ರಿ 9ರ ತನಕ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಸಂಜೆ 6ರ ತನಕ ಮದ್ಯದಂಗಡಿ ತೆರೆಯಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಆದರೆ ಎಂದಿನಂತೆ 144 ಸೆಕ್ಷನ್ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಇನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ನೀಡಿದ್ದಾರೆ

- Advertisement -

Latest News

error: Content is protected !!