Monday, June 8, 2026
Homeತಾಜಾ ಸುದ್ದಿಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿದ ಜೆಡಿಎಸ್

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿದ ಜೆಡಿಎಸ್

- Advertisement -
- Advertisement -

ನವದೆಹಲಿ: ಇಂದು ಉಪ ರಾಷ್ಟ್ರಪತಿ ಚುನಾವಣೆ ಮತದಾನ ನಡೆಯುತ್ತಿದ್ದು, ಚುನಾವಣೆಯಿಂದ ಜೆಡಿಎಸ್ ದೂರ ಉಳಿದಿದೆ.

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಯಾರಿಗೂ ಬೆಂಬಲ ನೀಡದಿರಲು ಜೆಡಿಎಸ್ ನಿರ್ಧಾರ ಮಾಡಿದೆ.

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಎರಡು ಮತ ಹಾಕುವ ಅವಕಾಶ ಇತ್ತು. ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಮತ್ತು ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಮತದಾರರಾಗಿದ್ದರು.

ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ದ್ರೌಪದಿ ಮರ್ಮುಗೆ ಬೆಂಬಲ ನೀಡಿದ್ದ ಜೆಡಿಎಸ್, ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ತಟಸ್ಥವಾಗಿ ಉಳಿದಿದೆ.

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಮತ್ತು ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಅಳ್ವ ಕಣದಲ್ಲಿದ್ದಾರೆ.

- Advertisement -

Latest News

error: Content is protected !!