Wednesday, June 24, 2026
Homeಕರಾವಳಿಸುಳ್ಯ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಸಚಿವ ಅಂಗಾರ ಭೇಟಿ

ಸುಳ್ಯ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಸಚಿವ ಅಂಗಾರ ಭೇಟಿ

- Advertisement -
- Advertisement -

ಸುಳ್ಯ: ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರ, ಕಲ್ಮಕಾರು, ಸಂಪಾಜೆ ಹಾಗೂ ಕಲ್ಲುಗುಂಡಿ ಭಾಗಗಳಲ್ಲಿ ನಿನ್ನೆ ಸಂಭವಿಸಿದ ಭೀಕರ ಜಲಪ್ರವಾಹದಿಂದ ಹಾನಿಗೀಡಾದ ಪ್ರದೇಶಗಳಿಗೆ ಇಂದು ಸುಳ್ಯ ಶಾಸಕ ಮತ್ತು ಸಚಿವ ಎಸ್. ಅಂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಂದಾಯ, ಅರಣ್ಯ ಹಾಗೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಪರಿಹಾರ ಕಾರ್ಯಾಚರಣೆಯ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಿದ ಸಚಿವ ಅಂಗಾರ, ನೆರೆಯಿಂದ ಹಾನಿಗೀಡಾದ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ಧನದ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ ಕಂಜಿಪಿಲಿ, ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ದ.ಕ.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುಳಿಯ ಕೇಶವ ಭಟ್, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎ.ವಿ.ತೀರ್ಥರಾಮ,ಗುತ್ತಿಗಾರು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಉದಯ ಕುಮಾರ್ ಕೊಲ್ಲಮೊಗ್ರ, ಉದಯ ಚಾಂತಾಳ,ಮಾಧವ ಚಾಂತಾಳ, ಚಂದ್ರಶೇಖರ ಕೊಲ್ಲಮೊಗ್ರ, ಕೇಶವ ಅಡ್ತಲೆ, ಚಂದ್ರಶೇಖರ ನೆಡೀಲು, ತಹಶೀಲ್ದಾರ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!