Thursday, June 4, 2026
Homeಕರಾವಳಿಉಡುಪಿಉಡುಪಿ; ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು

ಉಡುಪಿ; ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು

- Advertisement -
- Advertisement -

ಕುಂದಾಪುರ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ‌ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಕೋಟದಲ್ಲಿ ನಡೆದಿದೆ.

ಕೋಟ ನಿವಾಸಿ 67 ವರ್ಷದ ರತ್ನ ಮೃತ ದುರ್ದೈವಿ. ರತ್ನ ಅವರು 20 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಆ. 1ರಂದು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ  ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ  ಉಡುಪಿ ಅಜ್ಜರಕಾಡು ಆಸ್ಪತ್ರೆಗೆ  ದಾಖಲಿಸಲಾಗಿತ್ತು.

ಅಜ್ಜರ ಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರತ್ನ ಅವರು ಚಿಕಿತ್ಸೆ ಫಲಕಾರಿಯಾಗದೆ ಆ.5ರಂದು ರಾತ್ರಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!