Friday, June 5, 2026
Homeತಾಜಾ ಸುದ್ದಿರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚಳ ಹಿನ್ನೆಲೆ; ಇಂದು ಬೆಂಗಳೂರಿನಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ...

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚಳ ಹಿನ್ನೆಲೆ; ಇಂದು ಬೆಂಗಳೂರಿನಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ರೇಟ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ‌‌ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲು ಮುಂದಾಗಿದೆ.

ಇಂದು ಬೆಂಗಳೂರಿನಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಕೇಂದ್ರ ಆರೋಗ್ಯ ಇಲಾಖೆಯಿಂದ ಪಾಸಿಟಿವಿಟಿ ರೇಟ್ ಹೆಚ್ಚಳದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ಮತ್ತು ಕೇರಳದಲ್ಲಿ ಸೋಂಕಿನ ಪ್ರಮಾಣ ಹೆಚ್ಚಳದ ಹಿನ್ನೆಲೆಯಲ್ಲಿ ಸಭೆ ನಡೆಯಲಿದೆ.

ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಪಾಲ್ಗೊಳ್ಳಲಿದ್ದು, ಕೋವಿಡ್ ಕುರಿತ ಅಧ್ಯಯನ ವರದಿಯನ್ನು ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ.

- Advertisement -

Latest News

error: Content is protected !!