Saturday, June 6, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬೀ ಸಮುದ್ರದ ಮೇಲ್ಮೈಯಲ್ಲಿ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು ಇದರ ಪ್ರಭಾವದಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ 115.6 ಎಂ ಎಂ ನಿಂದ 204.4 ಎಂ ಎಂ ವರೆಗೆ ( ಆರೆಂಜ್ ಅಲರ್ಟ್) ಮಳೆ ಬೀಳುವ ಸಾಧ್ಯತೆ ಇರುತ್ತದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಸಂಖ್ಯೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

- Advertisement -

Latest News

error: Content is protected !!