Friday, June 5, 2026
Homeತಾಜಾ ಸುದ್ದಿಬಂಟ್ವಾಳ: ಆ.14ರಂದು ಪಂಜಿಕಲ್ಲಿನಲ್ಲಿ ಆಟಿದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಆಯೋಜನೆ

ಬಂಟ್ವಾಳ: ಆ.14ರಂದು ಪಂಜಿಕಲ್ಲಿನಲ್ಲಿ ಆಟಿದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಆಯೋಜನೆ

- Advertisement -
- Advertisement -

ಬಂಟ್ವಾಳ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಆಗಸ್ಟ್‌ 14ರಂದು ಪಂಜಿಕಲ್ಲು ಬಾಲೇಶ್ವರ ಗರಡಿ ಗದ್ದೆಯಲ್ಲಿ ಆಟಿದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ನಡೆಯಲಿದೆ. ಮಾಜಿ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷತೆಯಲ್ಲಿ, ಪಿಯೂಸ್ ಎಲ್. ರೋಡ್ರಿಗಸ್ ಅಧ್ಯಕ್ಷತೆಯಲ್ಲಿ ,ಆಟಿದ ಕೂಟ ಸಮಿತಿ ಬಂಟ್ವಾಳ ಸಾರಥ್ಯದಲ್ಲಿ ಆಗಸ್ಟ್‌ 14ರಂದು ದಿನವಿಡೀ ಕಾರ್ಯಕ್ರಮ ನಡೆಯಲಿದೆ..

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ ಅವರು, ತುಳುನಾಡಿನ ವಿವಿಧ ಬಗೆಯ ಖಾದ್ಯಗಳ ಜೊತೆಗೆ,ಪಾರಂಪರಿಕ ಆಟೋಟಗಳು ಇರಲಿವೆ. ಸುಮಾರು ಮೂವತ್ತು ಸಾವಿರದಷ್ಟು ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಇನ್ನು ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಪಿಯೂಶ್ ಎಲ್. ರೋಡ್ರಿಗಸ್, ಸಮಿತಿ ಪ್ರಧಾನ ಕಾರ್ಯದರ್ಶಿ ಸುದರ್ಶನ ಜೈನ್, ಕೋಶಾಧಿಕಾರಿ ದೇವಪ್ಪ ಕುಲಾಲ್‌, ಸಂಚಾಲಕರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!