Tuesday, September 1, 2026
Homeತಾಜಾ ಸುದ್ದಿಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಬಾಲಿವುಡ್​ನ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ

ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಬಾಲಿವುಡ್​ನ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ

- Advertisement -
- Advertisement -

ಮುಂಬೈ: ಬಾಲಿವುಡ್ ನ ಹೆಸರಾಂತ ಸಂಗೀತ ನಿರ್ದೇಶಕ ಮತ್ತು ಗಾಯಕ ಸಾಜಿದ್-ವಾಜಿದ್ ಖ್ಯಾತಿಯ ವಾಜಿದ್ ಖಾನ್ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ವಾಜಿದ್ ಖಾನ್ ರನ್ನು ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಭಾನುವಾರ ರಾತ್ರಿ ಆರೋಗ್ಯದಲ್ಲಿ ತೀವ್ರ ವೆಂಟಿಲೇಟರ್ ನಲ್ಲಿಡಿಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಾಜಿದ್ ಖಾನ್ ನಿಧನರಾಗಿದ್ದಾರೆ.

ವಾಜಿದ್‌ ಖಾನ್‌ಗೆ 42 ವರ್ಷ ವಯಸ್ಸಾಗಿತ್ತು. ಸಾಜಿದ್‌-ವಾಜಿದ್‌ ಜೋಡಿ ಬಾಲಿವುಡ್‌ನಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿತ್ತು. 1998ರಲ್ಲಿ ಸಲ್ಮಾನ್‌ ಖಾನ್‌ ನಟನೆಯ ಪ್ಯಾರ್‌ ಕಿಯಾ ತೋ ಡರ್‌ನಾ ಕ್ಯಾ ಮೂಲಕ ಈ ಜೋಡಿ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿತ್ತು.

ಲಾಕ್‌ಡೌನ್‌ ಟೈಮ್‌ನಲ್ಲಿ ಬಿಡುಗಡೆಯಾಗಿರೋ ಸಲ್ಮಾನ್‌ ಖಾನ್‌ ಹಾಡಿರೋ ಭಾಯ್‌ ಭಾಯ್‌ ಹಾಗೂ ಪ್ಯಾರ್‌ ಕರೋನಾ ಹಾಡಿಗೂ ಈ ಜೋಡಿಯೇ ಸಂಗೀತ ಸಂಯೋಜನೆ ಮಾಡಿತ್ತು. ಸಾಜಿದ್ ನಿಧನಕ್ಕೆ ನಟಿ ಪ್ರಿಯಾಂಕಾ ಚೋಪ್ರಾ, ಗಾಯಕ ಸೋನು ನಿಗಮ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!