Tuesday, April 30, 2024
Homeಉತ್ತರ ಕನ್ನಡಪರೇಶ್ ಮೇಸ್ತಾ ಕೊಲೆ ಪ್ರಕರಣದ ಆರೋಪಿಗೆ ವಕ್ಫ್​ ಬೋರ್ಡ್​ ಉಪಾಧ್ಯಕ್ಷ ಸ್ಥಾನ:  ಬಿಜೆಪಿ ವಿರುದ್ಧ ಕಾರ್ಯಕರ್ತರು...

ಪರೇಶ್ ಮೇಸ್ತಾ ಕೊಲೆ ಪ್ರಕರಣದ ಆರೋಪಿಗೆ ವಕ್ಫ್​ ಬೋರ್ಡ್​ ಉಪಾಧ್ಯಕ್ಷ ಸ್ಥಾನ:  ಬಿಜೆಪಿ ವಿರುದ್ಧ ಕಾರ್ಯಕರ್ತರು ಗರಂ

spot_img
- Advertisement -
- Advertisement -

ಉತ್ತರ ಕನ್ನಡ; ಹಿಂದೂ ಕಾರ್ಯಕರ್ತ ಪರೇಶ ಮೇಸ್ತಾ ಕೊಲೆ ಪ್ರಕರಣದ ಆರೋಪಿಗೆ ಬಿಜೆಪಿ ಸರಕಾರದ ಅವಧಿಯಲ್ಲೇ ವಕ್ಫ್​ ಬೋರ್ಡ್​ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು ಬಿಜೆಪಿ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪರೇಶ ಮೇಸ್ತ ಕೊಲೆ ಪ್ರಕರಣದ ಆರೋಪಿ ಅಜಾದ್ ಅಣ್ಣಿಗೇರಿಗೆ ವಕ್ಫ್ ಬೋರ್ಡ್ ಜಿಲ್ಲಾ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಆರೋಪಿಗೆ ವಕ್ಫ್​ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಟೀಕೆ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ವಕ್ಫ್​ ಸಲಹಾ ಸಮಿತಿ ಅಧ್ಯಕ್ಷ ಅನೀಷ್ ತಹಶೀಲ್ದಾರ್ ಈ ಬಗ್ಗೆ ವಕ್ಫ್ ಬೋರ್ಡ್ ಪದಾಧಿಕಾರಿಗಳನ್ನು ಬದಲಿಸುವಂತೆ ಸಚಿವರಿಗೆ ಪತ್ರ ಬರೆದಿರುವುದಾಗಿ ಹೇಳಿದ್ದಾರೆ.

ಹೊನ್ನಾವರದಲ್ಲಿ 2017ರ ಡಿಸೆಂಬರ್ 6ರಂದು ಪರೇಶ ಮೇಸ್ತಾ ಕೊಲೆ ಆಗಿತ್ತು.ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಕೊಲೆ ನಡೆದಿದ್ದು, ಆಗ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು.ಬಳಿಕ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು.

- Advertisement -
spot_img

Latest News

error: Content is protected !!