- Advertisement -
- Advertisement -
ಉಡುಪಿ: ದೇಶಾದ್ಯಂತ ಸ್ವಾತಂತ್ರ್ಯ ಅಮೃತ ಮಹೋತ್ಸವ ಮನೆಮಾಡಿದೆ. ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ತಿರಂಗಕ್ಕಾಗಿ ಲಕ್ಷಾಂತರ ಜನ ಪ್ರಾಣ ತೆತ್ತಿದ್ದಾರೆ.ಲಕ್ಷಾಂತರ ಜನ ಜೈಲು ಸೇರಿದ್ದಾರೆ, ನೇಣುಗಂಬಕ್ಕೇರಿದ್ದಾರೆ.
ಕೆಂಪುಕೋಟೆಯ ಮೇಲೆ ಧ್ವಜ ಹಾರಲು ಹಲವಾರು ಪ್ರಾಣ ತ್ಯಾಗಗಳಾಗಿವೆ.
ಪ್ರತಿ ಮನೆ ಪ್ರತಿ ಮನದಲ್ಲೂ ತ್ರಿವರ್ಣ ಧ್ವಜ ಹಾರಬೇಕು. ಪ್ರತಿ ಮನೆ ಪ್ರತಿ ಮನದಲ್ಲೂ ತ್ರಿವರ್ಣ ಧ್ವಜ ಹಾರಬೇಕು ಎಂದಿದ್ದಾರೆ.ತ್ರಿವರ್ಣ ಧ್ವಜ ಒಂದು ಧರ್ಮದ ಸಂಕೇತವಲ್ಲ. ತ್ರಿವರ್ಣ ಧ್ವಜ ಹಾರಿಸಲು ಇದ್ದ ನಿಬಂಧನೆಗಳನ್ನು ಮೂರು ದಿನ ತೆಗೆದುಹಾಕಲಾಗಿದೆ. ಜಾತಿ ಧರ್ಮ ಪಕ್ಷದ ಬಂಧನಗಳನ್ನು ಹೊರತುಪಡಿಸಿ ಅಮೃತ ಮಹೋತ್ಸವ ನಡೆಯುವ ವಿಶ್ವಾಸವಿದೆ. ಮನೆ ಮನೆಯಲ್ಲಿ ತಿರಂಗ ಹಾರಾಡುತ್ತದೆ ಹಾರಾಡಬೇಕು ಎಂದಿದ್ದಾರೆ.
- Advertisement -