Sunday, June 7, 2026
Homeಕರಾವಳಿಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

- Advertisement -
- Advertisement -

ಬೆಳ್ತಂಗಡಿ: ಕೇಂದ್ರ ಸರಕಾರದ ಆಶಯದಂತೆ ಮನೆ ಮನೆಯಲ್ಲೂ ತಿರಂಗಾವನ್ನು ಹಾರಿಸುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಿ. ಯದುಪತಿ ಗೌಡ ಹಾಗೂ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ್ ರವರು ಚಾಲನೆ ನೀಡಿದರು.

ರೇಂಜರ್ಸ್ ರೋವರ್ಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸುಮಾರು 200 ವಿದ್ಯಾರ್ಥಿಗಳಿಗೆ ರಾಷ್ಟ್ರಧ್ವಜವನ್ನು ವಿತರಿಸಲಾಯಿತು. ಬಳಿಕ ವಿದ್ಯಾ ಸಂಸ್ಥೆಯ ವತಿಯಿಂದ ಸಾರ್ವಜನಿಕರನ್ನು ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವ ಉದ್ದೇಶದಿಂದ ಅಂಗಡಿ ಮುಂಗಟ್ಟುಗಳಿಗೆ ತೆರಳಿ ರಾಷ್ಟ್ರದ್ವಜವನ್ನು ವಿತರಿಸಲಾಯಿತು.

- Advertisement -

Latest News

error: Content is protected !!