Friday, June 5, 2026
Homeತಾಜಾ ಸುದ್ದಿಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ ಗಂಡ

ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ ಗಂಡ

- Advertisement -
- Advertisement -

ಹಾಸನ: ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಗಂಡನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಕ್ರೂರ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಶನಿವಾರ ಸಂಭವಿಸಿದೆ. ಚೈತ್ರಾ ಕೊಲೆಗೀಡಾದ ಮಹಿಳೆ. ಆಕೆಯ ಪತಿ ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್ ಕೊಲೆ ಮಾಡಿದಾತ. ಇನ್ನು ಅಮಾನುಷವಾಗಿ ಪತ್ನಿಯ ಕತ್ತು ಪರಾರಿಯಾಗಲು ಯತ್ನಿಸಿದ್ದ ಶಿವಕುಮಾರ್​ನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಹೊನಮಾರನಹಳ್ಳಿ ಗ್ರಾಮದ ಚೈತ್ರಾಳನ್ನು 7 ವರ್ಷದ ಹಿಂದೆ ಶಿವಕುಮಾರ್​ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡೂ ಮಕ್ಕಳು ಹೆಣ್ಣು ಎಂಬ ಕಾರಣಕ್ಕೆ ಪತ್ನಿಗೆ ಚಿತ್ರಹಿಂಸೆ ಕೊಡುತ್ತಿದ್ದ. ಕೊರೊನಾ ಲಾಕ್​ಡೌನ್​ ವೇಳೆ ದೊಡ್ಡ ಗಲಾಟೆಯೇ ಆಗಿತ್ತು. ಚೈತ್ರಾಳ ಸರ, ಕಿವಿಯೋಲೆ ಕಿತ್ತುಕೊಂಡು ಹಲ್ಲೆ ಮಾಡಿದ್ದ. ಅವನ ಕಾಟ ತಾಳಲಾರದೆ ಚೈತ್ರಾ ತವರು ಮನೆಯಲ್ಲೇ ಇದ್ದಳು.  

ಹೀಗಾಗಿ ಗಂಡನಿಂದ ಜೀವನಾಂಶ ಕೋರಿ ಚೈತ್ರಾ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಹೊಳೆನರಸೀಪುರ ಕೋರ್ಟ್​ಗೆ ಚೈತ್ರಾ ಆಗಮಿಸಿದ್ದರು. ಮಧ್ಯಾಹ್ನ 12.30ರ ಸುಮಾರಿನಲ್ಲಿ ಕೋರ್ಟ್ ಆವರಣದ ಶೌಚಗೃಹಕ್ಕೆ ಚೈತ್ರಾ ತೆರಳಿದ್ದಾಗ ಹೊಂಚುಹಾಕಿ ಕಾಯುತ್ತಿದ್ದ ಶಿವಕುಮಾರ್​, ಆಕೆಯ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಚೈತ್ರಾಳನ್ನು ಕೂಡಲೇ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಬದುಕಲಿಲ್ಲ. ಚೈತ್ರಾಳ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ. ಇನ್ನು ಏನೂ ಅರಿಯದ ಪುಟ್ಟ ಮಕ್ಕಳು ಸಂಬಂಧಿಕರ ಗೋಳಾಟ ಮುಗಿಲು ಮುಟ್ಟಿತ್ತು.

- Advertisement -

Latest News

error: Content is protected !!