Thursday, June 4, 2026
HomeUncategorizedಕಡಬ: ಯುವಕನಿಗೆ ಚೂರಿ ಇರಿತ ಪ್ರಕರಣ: ಆರೋಪಿ ಅರೆಸ್ಟ್

ಕಡಬ: ಯುವಕನಿಗೆ ಚೂರಿ ಇರಿತ ಪ್ರಕರಣ: ಆರೋಪಿ ಅರೆಸ್ಟ್

- Advertisement -
- Advertisement -

ಕಡಬ:‌ ಯುವಕನೊಬ್ಬನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆತೂರು ಜನತಾ ಕಾಲನಿ ನಿವಾಸಿ ನವಾಝ್(29) ಚೂರಿ ಇರಿತಕ್ಕೊಳಗಾದ ಯುವಕ. ಈ ಸಂಬಂಧ ಆರೋಪಿ ನೌಫಲ್(29) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಸಂಜೆ ಮಾತನಾಡಲಿಕ್ಕಿದೆ ಎಂದು ನವಾಝ್ ರನ್ನು ಆರೋಪಿ ನೌಫಲ್ ತನ್ನ ಅಂಗಡಿಗೆ ಕರೆಸಿ ಹೊಟ್ಟೆಗೆ ಚೂರಿಯಿಂದ ಇರಿದಿದ್ದಾನೆ ಎಂದು ನವಾಝ್ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಕಡಬ ಠಾಣಾ ವ್ಯಾಪ್ತಿಯ ಆತೂರಿನಲ್ಲಿ ನಿನ್ನೆ ಸಂಜೆ ಘಟನೆ ನಡೆದಿತ್ತು. ಈ ಬಗ್ಗೆ ಕಡಬ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!