Friday, September 11, 2026
Homeಕರಾವಳಿಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ

- Advertisement -
- Advertisement -

ಸುಳ್ಯ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳಾದ ಸುಳ್ಯದ ಶಿಯಾಬುದ್ದೀನ್@ಶಿಯಾಬ್(33),ಸುಳ್ಯದ ಅಂಕತ್ತಡ್ಕ ನಿವಾಸಿ ರಿಯಾಜ್(27), ಸುಳ್ಯದ ಎಲಿಮಲೆ ನಿವಾಸಿ ಬಶೀರ್(23) ನನ್ನು ಕೋರ್ಟ್ ಅನುಮತಿ ಪಡೆದು ಪೊಲೀಸ್ ಕಸ್ಟಡಿ ಪಡೆದು ವಿಚಾರಣೆ ನಡೆಸಿದ್ದರು. ಇಂದು ತನಿಖೆ ಮುಕ್ತಾಯವಾಗಿದ್ದು ಬೆಳ್ಳಾರೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮೂವರಿಗೂ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರವೀಣ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರ ತನಿಖೆ ಇಂದು ಮುಕ್ತಾಯಗೊಂಡಿದೆ. ಇನ್ನೂ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(NIA) ಆರೋಪಿಗಳನ್ನು ಕಸ್ಟಡಿಗೆ ಪಡೆದು ತನಿಖೆ ಮುಂದುವರಿಸಲಿದ್ದಾರೆ.

- Advertisement -

Latest News

error: Content is protected !!