Thursday, June 4, 2026
Homeತಾಜಾ ಸುದ್ದಿಸಿದ್ದರಾಮಯ್ಯ ಸಿಎಂ ಆಗ್ಬೇಕು ಅಂದಿದ್ದ ಶ್ರೀರಾಮುಲು: ಪೇಚಿಗೆ ಸಿಲುಕಿದ ಬಿಜೆಪಿ: ನಳಿನ್‌ ಕುಮಾರ್‌ ಕಟೀಲ್‌ಗೆ ಸ್ಪಷ್ಟೀಕರಣ...

ಸಿದ್ದರಾಮಯ್ಯ ಸಿಎಂ ಆಗ್ಬೇಕು ಅಂದಿದ್ದ ಶ್ರೀರಾಮುಲು: ಪೇಚಿಗೆ ಸಿಲುಕಿದ ಬಿಜೆಪಿ: ನಳಿನ್‌ ಕುಮಾರ್‌ ಕಟೀಲ್‌ಗೆ ಸ್ಪಷ್ಟೀಕರಣ ನೀಡಿದ ಸಚಿವ

- Advertisement -
- Advertisement -

ಬೆಂಗಳೂರು: ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ. ಶ್ರೀರಾಮುಲು ಅವರು ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದರು.ಇದು ಬಿಜೆಪಿ ಪಕ್ಷವನ್ನ ಮುಜುಗರಕ್ಕೀಡು ಮಾಡಿದೆ. ಈ ಬಗ್ಗೆ ಬಿ.ಶ್ರೀರಾಮುಲು ಅವರಿಂದ ರಾಜ್ಯ ಬಿಜೆಪಿ ವಿವರಣೆ ಕೇಳಿದೆ.

ಈ ಹೇಳಿಕೆ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಸಚಿವ ಶ್ರೀರಾಮುಲು ಸ್ಪಷ್ಟೀಕರಣ ನೀಡಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ. ಡಿಕೆಶಿ, ಅವರ ನಡುವಿನ ಜಗಳ ನೋಡಿ ನಾನು ಹೇಳಿದ್ದೇನೆ. ನಮ್ಮ ಪಕ್ಷಕ್ಕೆ ಬರಲಿ ಅಂತ ಹೇಳಿದ್ದು ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮುಲು ಸ್ಪಷ್ಟನೆ ನೀಡಿದ್ದಾರೆ.

ಎಲ್ಲಾ ಸ್ಪಷ್ಟೀಕರಣ ರಾಜ್ಯಾಧ್ಯಕ್ಷರಿಗೆ ಕೊಟ್ಟಿದ್ದೇನೆ. ಮೋದಿ ಬಂದಾಗ ವಿರೋಧ ಮಾಡಿದ್ದವರೂ ಬಿಜೆಪಿಗೆ ಬಂದಿದ್ದಾರೆ. ಹಿಂದುಳಿದ ಜಾತಿಗಳು ಒಂದಾಗಬೇಕು. ಹಿಂದುಳಿದ ಜಾತಿಗಳನ್ನು ಒಗ್ಗೂಡಿಸುವ ಕೆಲಸ ಪ್ರಧಾನಿ ಮಾಡುತ್ತಿದ್ದಾರೆ. ಇತ್ತೀಚಿನ ಬೆಳವಣಿಗೆ ನೋಡಿದ್ರೆ ಕಾಂಗ್ರೆಸ್ ನಲ್ಲಿ ಕಿರಿ ಕಿರಿ ಕಾಣುತ್ತಿದೆ. ಅದನ್ನು ನೋಡಿದರೆ ಮುಂದೊಂದು ದಿನ ಸಿದ್ದರಾಮಯ್ಯ ಬಿಜೆಪಿಗೆ ಬರ್ತಾರೆ ಅನ್ನೋ ಮನೋಭಾವದಿಂದ ಮಾತನಾಡಿದೆ ಎಂದಿದ್ದಾರೆ..

- Advertisement -

Latest News

error: Content is protected !!