Monday, June 8, 2026
Homeಕರಾವಳಿಉಡುಪಿಉಡುಪಿಯ ಬ್ರಹ್ಮಗಿರಿ ಸರ್ಕಲ್ ನಲ್ಲಿ ಸಾವರ್ಕರ್ ಪುತ್ಥಳಿ ಸ್ಥಾಪನೆಗೆ ಅನುಮತಿ ಕೋರಿ ಉಡುಪಿ ನಗರಸಭೆಗೆ ಯಶಪಾಲ್...

ಉಡುಪಿಯ ಬ್ರಹ್ಮಗಿರಿ ಸರ್ಕಲ್ ನಲ್ಲಿ ಸಾವರ್ಕರ್ ಪುತ್ಥಳಿ ಸ್ಥಾಪನೆಗೆ ಅನುಮತಿ ಕೋರಿ ಉಡುಪಿ ನಗರಸಭೆಗೆ ಯಶಪಾಲ್ ಸುವರ್ಣ ಪತ್ರ

- Advertisement -
- Advertisement -

ಉಡುಪಿ: ಉಡುಪಿಯ ಬ್ರಹ್ಮಗಿರಿ ಸರ್ಕಲ್ ನಲ್ಲಿ ಸಾವರ್ಕರ್ ಪುತ್ಥಳಿ ಸ್ಥಾಪಿಸಲು ಬಿಜೆಪಿ ಮುಖಂಡ‌ ಯಶಪಾಲ್ ಸುವರ್ಣ ಉಡುಪಿ ನಗರಸಭೆಯಿಂದ ಅನುಮತಿ ಕೋರಿದ್ದಾರೆ.

ಬ್ರಹ್ಮಗಿರಿ ಸರ್ಕಲ್ ನಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ಅಳವಡಿಕೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪುತ್ಥಳಿ ಸ್ಥಾಪನೆಗೆ ಅನುಮತಿ ಕೋರಿ ನಗರಸಭೆಗೆ ಪತ್ರ ಬರೆದಿದ್ದಾರೆ.

ಫ್ಲೆಕ್ಸ್ ಅಳವಡಿಸಲು ಕಾಂಗ್ರೆಸ್ ಮತ್ತು ಎಸ್ ಡಿಪಿಐ ವಿರೋಧ ವ್ಯಕ್ತಪಡಿಸಿದಾಗ ಪ್ರತಿಮೆ ಸ್ಥಾಪಿಸುವುದಾಗಿ ಯಶಪಾಲ್ ಸುವರ್ಣ ಘೋಷಿಸಿದ್ದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಯಶಪಾಲ್ ಸುವರ್ಣ, ಉಡುಪಿ ನಗರಸಭೆಯ ಅಧ್ಯಕ್ಷರು ಮತ್ತು ಪೌರಾಯುಕ್ತರಿಗೆ ಪತ್ರ ಬರೆದಿದ್ದಾರೆ.

- Advertisement -

Latest News

error: Content is protected !!