Saturday, June 6, 2026
Homeಕರಾವಳಿಉಡುಪಿಉಡುಪಿ: ಸಾವರ್ಕರ್ ಬಗ್ಗೆ ಹೇಳಿಕೆ ಕೊಟ್ಮೇಲೆ ಪ್ರತಿಭಟನೆ ಸಹಿಸೋ ಶಕ್ತಿಯೂ ಇರಬೇಕು: ಸಿದ್ದರಾಮಯ್ಯ ವಿರುದ್ಧ ಸುನಿಲ್‌...

ಉಡುಪಿ: ಸಾವರ್ಕರ್ ಬಗ್ಗೆ ಹೇಳಿಕೆ ಕೊಟ್ಮೇಲೆ ಪ್ರತಿಭಟನೆ ಸಹಿಸೋ ಶಕ್ತಿಯೂ ಇರಬೇಕು: ಸಿದ್ದರಾಮಯ್ಯ ವಿರುದ್ಧ ಸುನಿಲ್‌ ವಾಗ್ದಾಳಿ

- Advertisement -
- Advertisement -

ಉಡುಪಿ: ಸಾವರ್ಕರ್ ಬಗ್ಗೆ ಹೇಳಿಕೆ ಕೊಡುವಾಗ ಪ್ರತಿಭಟನೆಯನ್ನು ಸಹಿಸುವ ಶಕ್ತಿಯೂ ಇರಬೇಕು. ಏನು ಬೇಕಾದರೂ ಹೇಳಿಕೆ ಕೊಟ್ಟು ಜೀರ್ಣ ಮಾಡಿಕೊಳ್ಳುತ್ತೇನೆ ಎನ್ನುವ ಕಾಲ ಹೊರಟು ಹೋಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಸುನಿಲ್‌ ಕುಮಾರ್‌ ಕಿಡಿ ಕಾರಿದ್ದಾರೆ.

ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವರು,  ಇದು ಯಾರೂ ಹೇಳಿಕೊಟ್ಟು ಮಾಡಿಸಿದ್ದಲ್ಲ. ಜನರ ಮನಸ್ಸಿನಲ್ಲಿರುವ ಭಾವನೆಗಳು ಸ್ಫೋಟಗೊಂಡಾಗ ಈ ರೀತಿ ಪ್ರತಿಭಟನೆಗಳು ಆಗುತ್ತವೆ ಎಂದಿದ್ದಾರೆ. ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟರೆ ಅದನ್ನ ಜನ ಸಹಿಸೋದಿಲ್ಲ ಎಂದಿದ್ದಾರೆ.

- Advertisement -

Latest News

error: Content is protected !!