Monday, June 15, 2026
Homeತಾಜಾ ಸುದ್ದಿಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ: ಪ್ರಹ್ಲಾದ ಜೋಶಿ

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ: ಪ್ರಹ್ಲಾದ ಜೋಶಿ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಶನಿವಾರ ಬಿಜೆಪಿ ಕೇಂದ್ರಿಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ಅವರು, ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮ ಪಕ್ಷದ ಅತ್ಯಂತ ಹಿರಿಯ ಮುಖಂಡರು ಹಾಗೂ ಮಾರ್ಗದರ್ಶಕರು. ಅವರನ್ನ ನಮ್ಮ ಪಕ್ಷದ ಉನ್ನತ ನೀತಿ ನಿರೂಪಣೆ ಸಮಿತಿಗೆ ನೇಮಕ ಮಾಡಿದ್ದಾರೆ. ನಮಗೆ ತುಂಬಾ ಸಂತೋಷವಾಗಿದೆ. ಹೀಗಾಗಿ ಅವರನ್ನ ಭೇಟಿ ಮಾಡಿ ಶುಭ ಕೋರಿದೆ’ ಎಂದರು. ಮುಂದಿನ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲೂ ನಿಮ್ಮ ಮಾರ್ಗದರ್ಶನ ಬೇಕು ಅಂದಿದ್ದೇನೆ. ಮುಂದೆಯೂ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾನು ಇನ್ನಷ್ಟು ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ ಎಂದರು.

- Advertisement -

Latest News

error: Content is protected !!