Saturday, August 29, 2026
Homeತಾಜಾ ಸುದ್ದಿಕಸಾಪದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಕಸಾಪದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

- Advertisement -
- Advertisement -

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

2022ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದೆ.

ಸೆಪ್ಟೆಂಬರ್ 15 ರವರೆಗೆ ದಂಡ ಶುಲ್ಕ 50 ರೂಪಾಯಿಯನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.

25 ರೂಪಾಯಿ ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆಯನ್ನು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ಪಡೆಯಬಹುದು.

ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿ ನಮೂನೆಯನ್ನು ಅಂಚೆ ಮೂಲಕ ಕಳುಹಿಸಲಾಗುತ್ತದೆ.

ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಇದಕ್ಕೆ ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ 25 ರೂಪಾಯಿ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ.

ಹೆಚ್ಚಿನ ವಿವರಗಳಿಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ದೂರವಾಣಿ ಸಂಖ್ಯೆ 080-26623584 ಮೂಲಕ ಗೌರವ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Latest News

error: Content is protected !!