Monday, June 8, 2026
Homeತಾಜಾ ಸುದ್ದಿಗಳಗನಾಥ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನ ನಿರಾಕರಿಸಿದ ಚಕ್ರವರ್ತಿ ಸೂಲಿಬೆಲೆ

ಗಳಗನಾಥ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನ ನಿರಾಕರಿಸಿದ ಚಕ್ರವರ್ತಿ ಸೂಲಿಬೆಲೆ

- Advertisement -
- Advertisement -

ಬೆಂಗಳೂರು: ಹಾವೇರಿಯ ಗಳಗನಾಥ ಮತ್ತು ನಾ.ಶ್ರೀ. ರಾಜಪುರೋಹಿತ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನವನ್ನು ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ನಿರಾಕರಿಸಿದ್ದಾರೆ.

ಅಧ್ಯಕ್ಷ ಸ್ಥಾನ ಒಪ್ಪಿಕೊಳ್ಳದೇ ಇರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚಕ್ರವರ್ತಿ ಸೂಲಿಬೆಲೆ ಬರೆದುಕೊಂಡಿದ್ದಾರೆ.

ಕಾರ್ಯದ ಒತ್ತಡದಿಂದ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸೂಲಿಬೆಲೆ ಹೇಳಿಕೊಂಡಿದ್ದಾರೆ.

ಅಲ್ಲದೇ ತಮ್ಮ ಬದಲಾಗಿ ಬೇರೆಯವರ ಹೆಸರುಗಳನ್ನು ಸೂಚಿಸುವುದಾಗಿಯೂ ಫೇಸ್ ಬುಕ್ ನಲ್ಲಿ ಚಕ್ರವರ್ತಿ ಸೂಲಿಬೆಲೆ‌ ಬರೆದುಕೊಂಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಹಾವೇರಿಯ ಗಳಗನಾಥ ಮತ್ತು ‌ನಾ.ಶ್ರೀ. ರಾಜಪುರೋಹಿತ ಪ್ರತಿಷ್ಠಾನದ ಅಧ್ಯಕ್ಷರಾಗಿ ಚಕ್ರವರ್ತಿ ಸೂಲಿಬೆಲೆ ಅವರನ್ನು ನೇಮಕ ಮಾಡಿ ನಿನ್ನೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.‌

- Advertisement -

Latest News

error: Content is protected !!