Thursday, June 4, 2026
Homeತಾಜಾ ಸುದ್ದಿಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ನಿಧನ

ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ನಿಧನ

- Advertisement -
- Advertisement -

ಮೈಸೂರು: ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ನಿಧನರಾಗಿದ್ದಾರೆ.

ರಾಮೇಗೌಡ ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿಯಲ್ಲಿ ವಾಸವಿದ್ದರು.ರಾಮೇಗೌಡ ಅವರಿಗೆ 64 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡ ನಿನ್ನೆ ರಾತ್ರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇಂದು ರಾಮೇಗೌಡ ಅವರ ಹುಟ್ಟೂರು ಸಿದ್ದರಾಮನ ಹುಂಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

- Advertisement -

Latest News

error: Content is protected !!