Thursday, June 4, 2026
Homeಕರಾವಳಿಉಡುಪಿಕಾರ್ಕಳ: ಸೂಪರ್ ವೈಸರ್ ಕಿರುಕುಳ ಆರೋಪ: ಮಹಿಳಾ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ ಯತ್ನ

ಕಾರ್ಕಳ: ಸೂಪರ್ ವೈಸರ್ ಕಿರುಕುಳ ಆರೋಪ: ಮಹಿಳಾ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ ಯತ್ನ

- Advertisement -
- Advertisement -

ಕಾರ್ಕಳ: ಸೂಪರ್ ವೈಸರ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕಾರ್ಕಳದ ಪ್ರತಿಷ್ಟಿತ ಖಾಸಗಿ ಕಾಲೇಜಿನ ಮಹಿಳಾ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ.

ಸುನೀತಾ(33) ಆತ್ಮಹತ್ಯೆಗೆ ಯತ್ನಿಸಿದವರು. ಸುನೀತಾ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ‌ ಕೆಲಸ ಮಾಡುತ್ತಿದ್ದು ಕೆಲಸಕ್ಕೆ ಸೇರಿದ ಒಂದೂವರೆ ತಿಂಗಳ ನಂತರ ಸೂಪರ್ ವೈಸರ್ ಹಿರಿಯಣ್ಣ ಅವರು ನನಗೆ ಜಾತಿ‌ನಿಂದನೆ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಈ‌ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಮನನೊಂದು ಸುನೀತಾ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ‌.

ಕೂಡಲೇ ಅವರನ್ನು ಕಾರ್ಕಳ ಸರ್ಕಾರಿ ಆಸ್ಪತಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ‌ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!