Friday, June 5, 2026
Homeಕರಾವಳಿದಕ್ಷಿಣ ಕನ್ನಡದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ಏಕಲವ್ಯ ಪ್ರಶಸ್ತಿ ಪ್ರದಾ‌ನ

ದಕ್ಷಿಣ ಕನ್ನಡದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ಏಕಲವ್ಯ ಪ್ರಶಸ್ತಿ ಪ್ರದಾ‌ನ

- Advertisement -
- Advertisement -

ಬೆಂಗಳೂರು: ರಾಷ್ಟ್ರೀಯ ಕ್ರೀಡಾ ದಿನದ ಹಿನ್ನೆಲೆಯಲ್ಲಿ ಇಂದು 2020ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಮತ್ತು 2021-22ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿಗಳ ಪ್ರದಾನ ಮಾಡಲಾಯಿತು.

ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ರಾಜ್ಯ ಸರ್ಕಾರದ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಿದರು.

ದಕ್ಷಿಣ ಕ‌ನ್ನಡ ಜಿಲ್ಲೆಯ ನೆಟ್ ಬಾಲ್ ಕ್ರೀಡಾಪಟು ನಿತಿನ್, ಕಬಡ್ಡಿ ಆಟಗಾರ ಪ್ರಶಾಂತ್ ಕುಮಾರ್ ರೈ, ಮತ್ತು ವಾಲಿಬಾಲ್ ಆಟಗಾರ ಅಶ್ವಲ್ ರೈ ಅವರಿಗೆ 2020ನೇ ಸಾಲಿನ ಏಕಲವ್ಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಕಂಬಳ ಓಟಗಾರ ಗೋಪಾಲ ನಾಯ್ಕ್ ಅವರಿಗೆ 2020ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಇನ್ನು ಉಜಿರೆಯ ಧರ್ಮಸ್ಥಳ ಮಾಡಿ ಎಜ್ಯುಕೇಶನಲ್ ಟ್ರಸ್ಟ್ ಮತ್ತು ಮಂಗಳೂರಿನ ಬಾಲಾಂಜನೇಯ ಜಿಮ್ನಾಶಿಯಂಗೆ 2011-22ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

- Advertisement -

Latest News

error: Content is protected !!