Saturday, June 6, 2026
Homeಕರಾವಳಿಉಡುಪಿಉಡುಪಿ: ವ್ಯವಹಾರದಲ್ಲಿ ನಷ್ಟ ಉಂಟಾಗಿ ವ್ಯಕ್ತಿ ಆತ್ಮಹತ್ಯೆ

ಉಡುಪಿ: ವ್ಯವಹಾರದಲ್ಲಿ ನಷ್ಟ ಉಂಟಾಗಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಉಡುಪಿ; ವ್ಯವಹಾರದಲ್ಲಿ ನಷ್ಟ ಉಂಟಾಗಿ ವ್ಯಕ್ತಿಯೊಬ್ಬರು ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಕಡೆಕಾರಿನಲ್ಲಿ  ನಡೆದಿದೆ.

ಕಡೆಕಾರು ನಿವಾಸಿ 54 ವರ್ಷದ ಉಮೇಶ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡವರು. ಇವರು ಗೋವಾದಲ್ಲಿ ವ್ಯವಹಾರ ನಡೆಸುತ್ತಿದ್ದು, ವ್ಯವಹಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಊರಿಗೆ ವಾಪಾಸಾಗಿದ್ದರು.

ಆರ್ಥಿಕ ಸಂಕಷ್ಟದಿಂದ ಮನನೊಂದ ಅವರು ನಿನ್ನೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ತಮ್ಮ ಶೈಲೇಶ್ ಎಮ್. ಹೆಗ್ಡೆ ನೀಡಿದ ದೂರಿನಂತೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!