Sunday, June 7, 2026
Homeಕರಾವಳಿಸೆ.2 ರಂದು‌‌ ಮಂಗಳೂರಿಗೆ ಮೋದಿ ಆಗಮನ‌ ಹಿನ್ನೆಲೆ: ಕರಾವಳಿ ಜಿಲ್ಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಸೆ.2 ರಂದು‌‌ ಮಂಗಳೂರಿಗೆ ಮೋದಿ ಆಗಮನ‌ ಹಿನ್ನೆಲೆ: ಕರಾವಳಿ ಜಿಲ್ಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

- Advertisement -
- Advertisement -

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟಂಬರ್ 2ರಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ  ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಫಲಾನುಭವಿಗಳನ್ನು ಕರೆತರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹೆಚ್ಚಿನ ಸಂಖ್ಯೆಯ ಬಸ್ಸುಗಳನ್ನು ನಿಯೋಜಿಸಲಾಗಿದೆ.

ಆದ್ದರಿಂದ ಆ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು, ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ ಹಾಗೂ ಭಟ್ಕಳ ವ್ಯಾಪ್ತಿಯಲ್ಲಿ ಸಂಚರಿಸುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕ.ರಾ.ರ.ಸಾ.ನಿಗಮದ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!